ಮಂಡ್ಯ: ಮದುವೆಗೆ ಹೋಗುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಟಿವಿಎಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.ಮೃತ ದುರ್ದೈವಿ ಸ್ಕೂಟರ್ ಸವಾರನನ್ನು ಹೆಬ್ಬಣಿ ಗ್ರಾಮದ ಮಹದೇವಪ್ಪ(55) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ತಮ್ಮನ ಮಗಳು ಸಿಂಚನಾ(11) ಮತ್ತು ಮೊಮ್ಮಗಳು ಮೌಲ್ಯ(13) ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಮದುವೆ ಸಮಾರಂಭಕ್ಕೆಂದು ಮಳವಳ್ಳಿಗೆ ಬರುತ್ತಿದ್ದ ವೇಳೆ ಪಂಡಿತಹಳ್ಳಿಯ ಶಿಂಷಾ ತಿರುವಿನಲ್ಲಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಮಹದೇವಪ್ಪ ಅವ್ರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡ್ಬೇಕು. ಜೊತೆಗೆ ನಿಯಮ ಮೀರಿ ವೇಗವಾಗಿ ಚಲಿಸುವ ಖಾಸಗಿ ಬಸ್ ಗಳ ಚಾಲಕರ ವಿರುದ್ಧ ಕ್ರಮ ವಹಿಸ್ಬೇಕು ಅಂತಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಸ್ಥಳಕ್ಕೆ ಶಾಸಕ ನರೇಂದ್ರ ಸ್ವಾಮಿ ಭೇಟಿ ನೀಡಿದ್ರು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರು-ಮೈಸೂರು ಹೆದ್ದಾರಿಯ ಟಿ.ಎಂ.ಹೊಸೂರು ಗೇಟ್ ಬಳಿ ನಿನ್ನೆ ತಡರಾತ್ರಿಯಷ್ಟೇ ಸಿನಿಮೀಯ ರೀತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ನಾಲ್ಕು ಪಲ್ಟಿ ಹೊಡೆದು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೂವರು ಅಪಘಾತಕ್ಕೆ ಬಲಿಯಾಗಿದ್ದಾರೆ.Sign in to your account
Username or Email Address


Password

 Remember Me


