ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಓಬಳಪುರ ಗ್ರಾಮದಲ್ಲಿ ದೇವಸ್ಥಾನವೊಂದರ ವಿಗ್ರಹವನ್ನು ಖದೀಮರು ರಾತ್ರೋರಾತ್ರಿ ಕದ್ದೊಯ್ದ ಘಟನೆ ನಡೆದಿದೆ.ಗ್ರಾಮದ ಹೊರವಲಯದ ಐತಿಹಾಸಿಕ ಸಿದ್ದರಾಮೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಕಟ್ಟರ್ ಬಳಸಿ ದೇವಾಲಯದ ಬಾಗಿಲು ಮುರಿದು ನಂದಿ ವಿಗ್ರಹಗಳು, ಹುಂಡಿಯಲ್ಲಿದ್ದ ಹಣ ಹಾಗೂ ಸಿ.ಸಿ.ಟಿವಿಯನ್ನ ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಪರಶುರಾಮಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


