ಮೈಸೂರು: ತೆಂಗಿನ ಮರದಿಂದ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ಕೆ ಆರ್ ನಗರ ತಾಲೂಕಿನ ಮುಂಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ವರದನಾಯಕ (58) ಮೃತ ದುರ್ದೈವಿ ರೈತ.ತಮ್ಮ ಜಮೀನಿನಲ್ಲಿದ್ದ ಮರದಲ್ಲಿ ಎಳನೀರು ಕೀಳಲು ವರದನಾಯಕ ಮರ ಏರಿದ್ದರು. ಆದ್ರೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮರದಿಂದ ಕಾಲುಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


