ಮಂಗಳೂರು: ಸ್ಟೇರಿಂಗ್ ತುಂಡಾಗಿ ಖಾಸಗಿ ಬಸ್ಸೊಂದು ರಸ್ತೆಗೆ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಡಿ ಘಾಟಿಯಲ್ಲಿ ನಡೆದಿದೆ.ಕೇರಳ ಮೂಲದ ಬಸ್ ಮೂಡಿಗೆರೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ಮಂಗಳವಾರ ಸಂಜೆ ಮೂರು ಗಂಟೆಯ ವೇಳೆ ಚಾರ್ಮಾಡಿ ಘಾಟಿನ 3ನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.ಬಸ್‍ನಲ್ಲಿ ಸುಮಾರು 35 ಜನರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯರು ಉಜಿರೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಘಟನೆಯಿಂದ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಒಂದು ಗಂಟೆಗಳ ಕಾಲ ಅಸ್ತವ್ಯಸ್ಥಗೊಂಡಿತ್ತು. ಕ್ರೇನ್ ಮೂಲಕ ಬಸ್ಸನ್ನು ಮೇಲಕ್ಕೆ ಎತ್ತಲಾಗಿದೆ. Sign in to your account
Username or Email Address


Password

 Remember Me


