ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯ ವಿಚಾರಿಸಿದ್ರು.ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪಾರ್ವತಮ್ಮ ರಾಜ್‍ಕುಮಾರ್ ಅವರು ಆರೋಗ್ಯವಾಗಿದ್ದಾರೆ, ಚೇತರಿಸಿಕೊಳ್ತಿದ್ದಾರೆ. ನನ್ನ ಜೊತೆ ಮಾತನಾಡಿದ್ರು. ಈಗ ಸುಧಾರಿಸಿಕೊಳ್ಳುತ್ತಿದ್ದಾರೆ ಅಂದ್ರು.ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದಾಗಿ ಪಾರ್ವತಮ್ಮ ರಾಜ್‍ಕುಮಾರ್ ಸೋಮವಾರದಂದು ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿ ಆರೋಗ್ಯ ವಿಚಾರಿಸಲು ಇಂದು ಬೆಳಿಗ್ಗೆ ಪುನೀತ್ ರಾಜ್‍ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ರು.ಪಾರ್ವತಮ್ಮ ಅವರ ಆರೋಗ್ಯದ ಬಗ್ಗೆ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿರೋ ರಾಮಯ್ಯ ಆಸ್ಪತ್ರೆ ವೈದ್ಯರಾದ ಡಾ. ಸಂಜಯ್ ಕುಲಕರ್ಣಿ, ಇನ್ನು ಎರಡು ದಿನ ಪಾರ್ವತಮ್ಮ ರಾಜ್‍ಕುಮಾರ್ ಅವರನ್ನ ಆಸ್ಪತ್ರೆಯಲ್ಲಿ ಇರಿಸಿಕೊಳ್ಳಲಾಗುತ್ತೆ. ಹಿಂದೆ ಕಾಣಿಸಿಕೊಂಡಿದ್ದ ಬ್ರೆಸ್ಟ್ ಕ್ಯಾನ್ಸರ್ ಲಿವರ್‍ಗೂ ಹರಡ್ತಿರೋದ್ರಿಂದ ಚಿಕಿತ್ಸೆ ನೀಡಲಾಗ್ತಿದೆ. ಶುಗರ್, ಬಿಪಿ ವ್ಯತ್ಯಯವಾಗ್ತಿರೋದ್ರಿಂದ ಆಸ್ಪತ್ರೆಯಲ್ಲಿಯೇ ಇರಿಸಿಕೊಳ್ಳಲಾಗ್ತಿದೆ. ಜಾಂಡೀಸ್ ಕೂಡ ಇದೆ. ಅದಕ್ಕೂ ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಚೇತರಿಸಿಕೊಳ್ತಿದ್ದಾರೆ ಅಂತ ಹೇಳಿದ್ದಾರೆ.Sign in to your account
Username or Email Address


Password

 Remember Me


