ಹಾಸನ: ಕುಡಿಯುವ ನೀರಿನ ಪಂಪ್ ಹೌಸ್‍ನಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಹಾಸನದಲ್ಲಿ ನಡೆದಿದೆ.ಬೇಲೂರು ಹೊರವಲಯದ ಗೆಂಡೆಹಳ್ಳಿ ಬಳಿ ಇರುವ ಪಂಪ್‍ಹೌಸ್‍ನಲ್ಲಿ ಈ ಘಟನೆ ನಡೆದಿದ್ದು, ಸೋರಿಕೆಯಾದ ಅನಿಲದ ವಾಸನೆ ಅರ್ಧ ಕಿಲೋಮೀಟರ್ ವ್ಯಾಪಿಸಿತ್ತು. ತಡ ರಾತ್ರಿಯೇ ಕಾರ್ಯಾಚರಣೆ ನಡೆಸಿದ ಪುರಸಭೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಅಸ್ವಸ್ಥರಾಗಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. Sign in to your account
Username or Email Address


Password

 Remember Me


