ರಾಯಚೂರು: ವಿದ್ಯುತ್ ಕಂಬ ಏರಿ ರಿಪೇರಿ ಕೆಲಸ ಮಾಡುತ್ತಿದ್ದ ವೇಳೆ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಕಂಬದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಜಿಲ್ಲೆಯ ದೇವದುರ್ಗ ತಾಲೂಕಿನ ಮುಕ್ಕಲಗುಡ್ಡ ತಾಂಡದಲ್ಲಿ ಈ ಘಟನೆ ನಡೆದಿದೆ. ಪಕ್ಕದ ಮುರಾನಪುರ ತಾಂಡದ ನಿವಾಸಿಯಾದ 18 ವರ್ಷದ ರಾಜೇಶ್ ಮೃತ ಯುವಕ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಹಿನ್ನೆಲೆಯಲ್ಲಿ ರಾಜೇಶ್ ರಿಪೇರಿ ಮಾಡಲು ಕಂಬ ಹತ್ತಿದ್ದ. ಆದ್ರೆ ವಿದ್ಯುತ್ ಪ್ರಸರಣ ಆರಂಭವಾಗಿದ್ದು, ಶಾಕ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.ಈ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


