ಮಂಗಳೂರು: ಶಿವಮೊಗ್ಗ ರಾಗಿಗುಡ್ಡದಂತೆಯೇ ಮಂಗಳೂರಿನ ಉಳ್ಳಾಲದಲ್ಲಿಯೂ ಈದ್ ಮಿಲಾದ್ ಮೆರವಣಿಗೆಯ (Eid Milad Procession) ನೆಪದಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಇದೀಗ ಯುವಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.ಈದ್ ಮಿಲಾದ್ ಮೆರವಣಿಗೆ ನಡೆಸಿದ ನೂರಾರು ಯುವಕರ ತಂಡ ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿ ರಸ್ತೆ ಬಂದ್ ಮಾಡಿ ಅಬ್ಬಕ್ಕ ವೃತ್ತವನ್ನೇರಿ ಹಸಿರು ಬಾವುಟ ಪ್ರದರ್ಶಿಸಿ ಚೀರಾಡುತ್ತಾ, ಸೈಲೆನ್ಸರ್ ಶಬ್ಧ ಮಾಡಿ, ಬೈಕ್ ಹಾರ್ನ್ ಹಾಕಿಕೊಂಡು ಪುಂಡಾಟ ಮೆರೆದಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿವಮೊಗ್ಗ (Shivamogga) ಘಟನೆಯ ಬೆನ್ನಲ್ಲೇ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿಉಳ್ಳಾಲ ಪೊಲೀಸರು (Ullala Police Staion) ವೀಡಿಯೋ ಆಧರಿಸಿ ಯುವಕರ ಪತ್ತೆ ಮಾಡಿದ್ದಾರೆ. ಉಳ್ಳಾಲ, ಮಂಜನಾಡಿ, ಮದಕ, ಕೋಣಾಜೆ, ದೇರಳಕಟ್ಟೆ, ಬಂಟ್ವಾಳ ಹಾಗೂ ಬೆಳ್ತಂಗಡಿ ಭಾಗದ ಯುವಕರು ಎಂದು ತಿಳಿದು ಬಂದಿದೆ. ಈ ಎಲ್ಲಾ ಯುವಕರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


