ಮೈಸೂರು: ವಿದ್ಯುತ್ ಕಂಬಕ್ಕೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಮಾನಂದವಾಡಿ ರಸ್ತೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.ರಾಜೇಶ್(22), ನಂದನ್(21) ಮೃತ ದುರ್ದೈವಿಗಳು. ಇವರು ಮೈಸೂರು ತಾಲೂಕು ಮಹದೇವಪುರದ ಮಾನಂದವಾಡಿ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆಯಲ್ಲಿ 20 ವರ್ಷದ ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ತಡರಾತ್ರಿ ಮೂವರು ಒಂದೇ ಬೈಕ್ ನಲ್ಲಿ ಪ್ರಯಣಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಬೈಕ್ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೈಸೂರಿನ ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


