ಬೆಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಹಳ್ಳಿಯ ಎನ್‍ಡಿಡಿಎಫ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಟೇರಿಂಗ್ ಸಿಸ್ಟಂನಲ್ಲಿ ಕೆಲಸ ಮಾಡ್ತಿದ್ದ ರವಿ ಮೃತ ದುರ್ದೈವಿ.ಬೆಳಗ್ಗೆ ಕೆಲಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಡಿಪೋ ನಂಬರ್ 9ಕ್ಕೆ ಸೇರಿದ ಬಸ್ ಮೆಜೆಸ್ಟಿಕ್‍ನಿಂದ ಲಗ್ಗೆರೆಗೆ ಹೋಗ್ತಿತ್ತು. ಘಟನೆ ಬೆನ್ನಲ್ಲೇ ಚಾಲಕ ಸ್ಥಳದಿಂದಲೇ ಪರಾರಿಯಾಗಿದ್ದಾನೆ.ಅಪಘಾತ ನಡೆದ ಜಾಗದಲ್ಲೇ ಮೃತದೇಹವಿಟ್ಟು ಸ್ಟೇರಿಂಗ್ ಸಿಸ್ಟಂ ನೌಕರರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ರು. ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


