ಯಾದಗಿರಿ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತೆಲಂಗಾಣದ ಸರ್ಕಾರಿ ಬಸ್ ಡಿಕ್ಕಿಯಾಗಿ ಬಾಲಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಪಸಪುಲ್ ಕ್ರಾಸ್ ಬಳಿ ನಡೆದಿದೆ.8 ವರ್ಷದ ಬಾಲಕ ಕಾರ್ತಿಕ್ ಮೃತ ದುರ್ದೈವಿ. ಕಾರ್ತಿಕ್ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಾಸ್ಸಾಗಲೆಂದು ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಪೋಷಕರ ಕಣ್ಣೆದುರೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಬಾಲಕನಿಗೆ ಡಿಕ್ಕಿ ಹೊಡೆದ ನಂತರ ವೇಗವಾಗಿ ಮುಂದೆ ಹೋದ ಬಸ್ಸನ್ನು ಗ್ರಾಮಸ್ಥರು ತಡೆದಿದ್ದಾರೆ. ಘಟನೆ ಸಂಬಂಧ ಬಸ್ ಚಾಲಕ ನರಸಿಂಹಲುನನ್ನ ಪೊಲೀಸರು ಬಂಧಿಸಿದ್ದು, ನಿರ್ವಾಹಕ ಪರಾರಿಯಾಗಿದ್ದಾನೆ.ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


