ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾವಚಿತ್ರಕ್ಕೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅವಮಾನ ಮಾಡಲಾಗಿದೆ.ನಗರದ ಮಲ್ಕಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೃಷ್ಣ ಅವರಿಗೆ ಅವಮಾನ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಮುಖ್ಯಮಂತ್ರಿಗಳ ಭಾವಚಿತ್ರಗಳಿರುವ ಪೋಸ್ಟರ್‍ನಲ್ಲಿ ಅವರ ಮುಖದ ಮೇಲೆ ಪೆನ್ನಿನಿಂದ ಗೀಚಿ ಕಳ್ಳ ಕೃಷ್ಣ ಎಂದು ಬರೆಯಲಾಗಿದೆ.ಎಸ್‍ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದುವ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಈ ರೀತಿ ನಡೆದಿರೋದ್ರಿಂದ ಯಾರೋ ಕಾರ್ಯಕರ್ತರು ಮಾಡಿರಬಹುದು ಎಂದು ಹೇಳಲಾಗುತ್ತಿದೆ. Sign in to your account
Username or Email Address


Password

 Remember Me


