ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದ ಹೊಸಹೊಳಲು ರಸ್ತೆಯಲ್ಲಿರುವ ಹೇಮಾವತಿ ಜಲಾಶಯದ ವಸತಿ ಸಮುಚ್ಚಯದಲ್ಲಿಯ ಪೊಲೀಸರೊಬ್ಬರ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.ಶೀಲಾ ಚಂದ್ರಶೇಖರ್ ಎಂಬವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಕಳ್ಳತನ ನಡೆದಿದೆ. ಶೀಲಾ ಅವರು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಶೀಲಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ, ರಾತ್ರಿ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ.ಮನೆಯ ಬಾಗಿಲು ಮುರಿದು ಒಳನುಗ್ಗಿರೋ ಕಳ್ಳರು ಬೀರುವಿನ ಬಾಗಿಲು ತೆರೆದು ಅದರೊಳಗಿದ್ದ ಸುಮಾರು ಒಂದು ಲಕ್ಷದ 20 ಸಾವಿರ ನಗದು ಹಣ ದೋಚಿದ್ದಾರೆ.ನಗದು ದೋಚಿದ ನಂತರ ಮನೆಯ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


