ಮಂಡ್ಯ: ರಸ್ತೆ ಬದಿ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಕಾರೊಂದು ಸಿನಿಮೀಯ ರೀತಿಯಲ್ಲಿ ಡಿಕ್ಕಿ ಹೊಡೆದು, ಸುಮಾರು 15 ಅಡಿಯಷ್ಟು ದೂರ ಕಾರನ್ನು ತಳ್ಳಿಕೊಂಡು ಹೋದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮೆ  3ರಂದು ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮದ್ದೂರಿನ ಗಿರಿ ಟೈರ್ ನ ಮಾಲೀಕ ಗಿರೀಶ್ ಎಂಬವರು ತಮ್ಮ ಕಾರನ್ನು ರಸ್ತೆ ಬದಿ ನಿಲ್ಲಿಸಿ ಬ್ಯಾಂಕ್ ಚಲನ್ ತರಲು ಅಂಗಡಿಯೊಳಗೆ ಹೋಗಿದ್ದಾರೆ. ಈ ವೇಳೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ಗಿರೀಶ್ ಅವರ ಕಾರಿಗೆ ಡಿಕ್ಕಿ ಹೊಡೆದು ಸುಮಾರು ಹದಿನೈದು ಅಡಿಯಷ್ಟು ಮುಂದೆ ಕಾರನ್ನು ತಳ್ಳಿಕೊಂಡು ಹೋಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಿಂತಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಮಾಡದ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.ಈ ಎಲ್ಲಾ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಂತಿದ್ದ ಕಾರಿಗೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆಯುವ ದೃಶ್ಯವಂತು ಮೈ ಜುಮ್ಮೆನ್ನುವಂತಿದೆ. ಇನ್ನು ಡಿಕ್ಕಿ ಹೊಡೆದ ಕಾರು ಬೆಂಗಳೂರು ಮೂಲದ ಸೈಯದ್ ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಜೊತೆಗೆ ಈ ಕಾರಿನಲ್ಲಿ ಚಾಲಕ ಸೇರಿದಂತೆ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಇವ್ರಿಗೆಲ್ಲ ಸಣ್ಣ ಪುಟ್ಟ ಗಾಯಾಗಳಾಗಿವೆ. ಘಟನೆಯಲ್ಲಿ ಗಿರೀಶ್ ಅವರ ಕಾರು ಸಂಪೂರ್ಣವಾಗಿ ಜಖಂ ಆಗಿದೆ.ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


