ಬಳ್ಳಾರಿ: ಹೊಸಪೇಟೆ ಶಹರ ಠಾಣೆಯ ಸಿಪಿಐ ಗಾಂಜಾ ಕೇಸಿನಲ್ಲಿ ದಂಪತಿಯನ್ನ ಬೆದರಿಸಿ 5 ಲಕ್ಷ ರೂ. ಹಣಕ್ಕೆ ಬೇಡಕೆಯಿಟ್ಟ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೇ ಸಿಪಿಐ ಕಿರುಕುಳಕ್ಕೆ ಬೇಸತ್ತ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ.ಹೊಸಪೇಟೆ ನಿವಾಸಿಗಳಾದ ಸರೋಜಮ್ಮ, ಮೈಲಾರಪ್ಪ ದಂಪತಿಯ ಸಂಬಂಧಿಕರೊಬ್ಬರ ಮನೆಯಲ್ಲಿ ಇತ್ತೀಚಿಗೆ ಗಾಂಜಾ ಪತ್ತೆಯಾಗಿತ್ತು. ಇದೇ ಪ್ರಕರಣದಲ್ಲಿ ದಂಪತಿಯನ್ನು ಬಂಧಿಸುವುದಾಗಿ ಬೆದರಿಸಿ ಹೊಸಪೇಟೆ ಟೌನ್ ಪೊಲೀಸ್ ಠಾಣೆಯ ಸಿಪಿಐ ಲಿಂಗನಗೌಡ ನೆಗಳೂರ 5 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಸಿಪಿಐ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿಯ ಪರಿಸ್ಥಿತಿ ಗಂಭಿರವಾಗಿದ್ದು, ಇದೀಗ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


