ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹೊಸ ಆಟ ಶುರು ಮಾಡಿದ್ದಾರೆ.ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಜಯಲಲಿತಾ ಪ್ರಮುಖ ಆರೋಪಿಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪಿಸಿ ಘೋಷ್ ಹಾಗೂ ಅಮಿತಾವ್ ರಾಯ್ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಇವರ ಜೊತೆ ಮತ್ತಿಬ್ಬರು ಆರೋಪಿಗಳಾದ ಸುಧಾಕರನ್ ಹಾಗೂ ಇಳವರಸಿ ಕೂಡ ಅರ್ಜಿ ಹಾಕಿದ್ದಾರೆ.ಫೆಬ್ರವರಿ 14 ರಂದು ಕರ್ನಾಟಕ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಶಶಿಕಲಾ ನಟರಾಜನ್, ಸುಧಾಕರನ್ ಹಾಗೂ ಇಳವರಸಿಯನ್ನು ದೋಷಿಗಳು ಎಂದು ತೀರ್ಪು ನೀಡಿ, 4 ವರ್ಷ ಜೈಲು, 10 ಕೋಟಿ ರೂ. ದಂಡ ವಿಧಿಸಿತ್ತು.Sign in to your account
Username or Email Address


Password

 Remember Me


