ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 4ರ 8ನೇ ಮೈಲಿಯ ನವಯುಗ ಟೋಲ್ ಬಳಿ ಈ ಘಟನೆ ನಡೆದಿದೆ. ಹಾಸನದ ಸಕಲೇಶಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಕ್ಕಿ ಹೊಡೆದಿದ್ದು, 33 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್‍ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಸದ್ಯಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


