ರಾಯಚೂರು: ಲಿಂಗಸುಗೂರಿನ ಜನತಾ ಕಾಲೋನಿಯಲ್ಲಿ ಮುಸುಕುಧಾರಿ ವೇಷದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.ಲಿಂಗಸುಗೂರು ನಿವಾಸಿ ಶರ್ಮುದ್ದೀನ್ ಹಾಗೂ ಅವನ ಪತ್ನಿ ಮತ್ತು ಮಕ್ಕಳು ಬಂಧಿತ ಆರೋಪಿಗಳು. ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ಕು ಜನರಿಂದ ಈ ಕೃತ್ಯ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಮಹಿಳೆ ಶರಣಮ್ಮ ಮುಖ, ಕೈ-ಕಾಲುಗಳ ಮೇಲೆ ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ.ಶರ್ಮುದ್ದಿನ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ಕಾರಣಕ್ಕೆ ಶರ್ಮುದ್ದಿನ್ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ಹಾಗು ಇಬ್ಬರು ಮಕ್ಕಳು ಭಾನುವಾರ ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಹಲ್ಲೆ ಮಾಡಿ ಆಸಿಡ್ ಎರಚಿ ಪರಾರಿಯಾಗಿದ್ದರು.ಘಟನೆ ಹಿನ್ನೆಲೆಯಲ್ಲಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


