ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ತಂಡ ಇವತ್ತು ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಸಭೆ ನಡೆಸಿ ತಮಗೆ ಗೆಲುವು ಕೊಟ್ಟ ಮತದಾರರಿಗೆ ಕೃತಜ್ಞತೆ ಹೇಳಲಿದ್ದಾರೆ.ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಸಾರ್ವಜನಿಕ ಸಭೆ ಹೆಸರಿನಲ್ಲಿ ನಡೆಯುತ್ತಿರುವ ಈ ಸಮಾವೇಶ, ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಜೊತೆಗೆ ಗೆಲವಿನ ವಿಜಯೋತ್ಸವದ ಸಮಾವೇಶವಾಗಿ ಮಾರ್ಪಡುವುದರಲ್ಲಿ ಯಾವ ಅನುಮಾನವೂ ಇಲ್ಲ ಎನ್ನಲಾಗಿದೆ.ಇವತ್ತು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಲಿದ್ದಾರೆ. ನಂತರ ಅಲ್ಲಿಂದ ರಸ್ತೆ ಮಾರ್ಗವಾಗಿ ಗುಂಡ್ಲುಪೇಟೆಗೆ ತೆರಳಿ 11.30 ಕ್ಕೆ ಸಾರ್ವಜನಿಕ ಸಭೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 2.30 ಕ್ಕೆ ನಂಜನಗೂಡು ಪಟ್ಟಣದಲ್ಲಿ ಸಭೆ ನಡೆಸಲಿದ್ದಾರೆ.ಎರಡೂ ಸಭೆಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾSign in to your account
Username or Email Address


Password

 Remember Me


