ರಾಮನಗರ: ನಾವು ಇರುವುದು ಏಳು ಜನರಲ್ಲ 14 ಜನರಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಮಗೆ ಕಾಂಗ್ರೆಸ್‍ನಿಂದ ಟಿಕೆಟ್ ಸಿಗಲಿದೆ ಎಂದು ಜೆಡಿಎಸ್‍ನ ಬಂಡಾಯ ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ.ಜಿಲ್ಲೆಯ ಮಾಗಡಿಯಲ್ಲಿ ಇಂದು ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 110ನೇ ಗುರುವಂದನ ಕಾರ್ಯಕ್ರಮದಲ್ಲಿ ಜಮೀರ್ ಅಹಮದ್ ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು ನಾವು 15 ಜನ ಜೆಡಿಎಸ್ ಶಾಸಕರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದೇವೆ. ಜೆಡಿಎಸ್ ಪಕ್ಷ ಮುಂದಿನ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲುತ್ತದೆ ಎನ್ನುವುದು ಸುಳ್ಳು. ಒಂದು ವೇಳೆ 120 ಸ್ಥಾನಗಳನ್ನು ಗೆದ್ದರೆ ತಾವು ರಾಜಕೀಯವಾಗಿ ಸನ್ಯಾಸ ತೆಗೆದುಕೊಳ್ಳುವುದಲ್ಲದೇ ರಾಜ್ಯವನ್ನೇ ತೊರೆಯುವುದಾಗಿ ಅವರು ತಿಳಿಸಿದರು.ಇನ್ನೂ ತಮಗೆ ಕಾಂಗ್ರೆಸ್‍ನಿಂದ ಟಿಕೆಟ್ ಸಿಗಲಿದೆ. ಈ ಬಗ್ಗೆ ಈಗಾಗಲೇ ಹೈಕಮಾಂಡ್ ಕೂಡಾ ಗ್ರೀನ್ ಸಿಗ್ನಲ್ ನೀಡಿದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಹೊಂದಾಣಿಕೆ ಮಾಡಿಕೊಂಡ್ರೂ ನಾವು ಜೆಡಿಎಸ್ ಪಕ್ಷಕ್ಕೆ ಹೋಗುವುದಿಲ್ಲವೆಂದು ಜಮೀರ್ ಅಹಮದ್ ಹೇಳಿದರು. Sign in to your account
Username or Email Address


Password

 Remember Me


