ಬಳ್ಳಾರಿ: ಖಾಸಗಿ ಬಸ್ ಮತ್ತು ಸರಕು ಸಾಗಾಣೆ ಕ್ಯಾಬ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಕೋಳೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-153 ರಲ್ಲಿ ಇಂದು ಬೆಳಗ್ಗೆ ನಡೆದಿದೆ.ಕ್ಯಾಬ್ ಚಾಲಕ ಉಪೇಂದ್ರ (30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕ್ಲೀನರ್ ಆಗಿದ್ದ ಉಪೇಂದ್ರನ ಸಹೋದರ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಸ್ ಚಾಲಕ ಸಹ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಬೆಂಗಳೂರಿನಿಂದ ರಾಯಚೂರು ನಗರಕ್ಕೆ ಹೊರಟಿತ್ತು ಮತ್ತು ಕ್ಯಾಬ್ ಬೀದರ್ ನಿಂದ ಬೆಂಗಳೂರಿಗೆ ಹೊರಟಿತ್ತು ಎಂದು ತಿಳಿದುಬಂದಿದೆ.ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬಸ್‍ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ ಎಂದು ಸಿಪಿಐ ಶ್ರೀನಿವಾಸ್ ಹೇಳಿದ್ದಾರೆ.  Sign in to your account
Username or Email Address


Password

 Remember Me


