ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗ್ರಾಮದ ವರದರಾಜು ಮತ್ತು ಸುಮಿತ್ರ ದಂಪತಿಯ ಪುತ್ರ ಜೀವನ್ ಮೃತ ದುರ್ದೈವಿ. ಬಾಲಕ ಜೀವನ್ ತನ್ನ ಮನೆ ಬಳಿ ಆಟವಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ತಮ್ಮ ಐದು ವರ್ಷದ ಮಗನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆಗೆ ಸಂಬಂಧಿಸಿದಂತೆ ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


