ಬೀದರ್: ಔರಂಗಾಬಾದ್ ನಿಂದ ಹೈದ್ರಾಬಾದ್‍ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಎಂಜಿನ್ ಸೇರಿದಂತೆ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಳಗಾಪುರ ಬ್ರಿಡ್ಜ್ ಬಳಿ ನಡೆದಿದೆ.ತಡರಾತ್ರಿ 1:45ಕ್ಕೆ ಈ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಕೆಲವರಿಗೆ ಸಣ್ಣ ಪಟ್ಟ ಗಾಯಗಳಾಗಿವೆ. ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.ಘಟನೆ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


