ಚಿಕ್ಕಬಳ್ಳಾಪುರ: ಕೆರೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ (SSLC Student) ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ (Bagepally) ಪಟ್ಟಣ ಹೊರವಲಯದ ಕೊಂಡವಾರಪಲ್ಲಿಯಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ ತಾಲೂಕಿನ ಈರೇನಹಳ್ಳಿ ಗ್ರಾಮದ ನಿವಾಸಿ ಶಂಕರ್ ಹಾಗೂ ನಾಗಮ್ಮ ದಂಪತಿಯ ಪುತ್ರಿ ನಯನ (15) ಮೃತ ವಿದ್ಯಾರ್ಥಿನಿ. ಶನಿವಾರ ಗ್ರಾಮದಿಂದ ಚಿಕ್ಕಬಳ್ಳಾಪುರದ ಖಾಸಗಿ ಶಾಲೆಗೆ ಹೋಗುವುದಾಗಿ ಹೇಳಿದ ವಿದ್ಯಾರ್ಥಿನಿ ಶಾಲೆಗೆ ಹೋಗಿಲ್ಲ. ಬದಲಾಗಿ ಚಿಕ್ಕಬಳ್ಳಾಪುರ ನಗರದಿಂದ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬಾಗೇಪಲ್ಲಿಗೆ ತೆರಳಿ ಅಲ್ಲಿಂದ ಬಾಗೇಪಲ್ಲಿ ಪಟ್ಟಣ ಹೊರವಲಯದ ಕೊಂಡ್ರವಾರಪಲ್ಲಿ ಕೆರೆ ಬಳಿ ಹೋಗಿದ್ದಾಳೆ.ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಶೂ, ಬ್ಯಾಗ್ ಪತ್ತೆಯಾಗಿದ್ದು ಕೆರೆಯಲ್ಲಿ ವಿದ್ಯಾರ್ಥಿನಿ ಶವ ತೇಲಿ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯ ಕುರಿಗಾಹಿಗಳು ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಬ್ಯಾಗ್ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿಯ ವಿಳಾಸ ತಿಳಿದುಬಂದಿದೆ. ಬಳಿಕ ಪೋಷಕರು ಹಾಗೂ ಶಾಲೆಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವುವಿದ್ಯಾರ್ಥಿನಿಯ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬುದು ಇನ್ನೂ ಖಚಿತವಾಗಿಲ್ಲ. ಆಕೆಯ ಪೋಷಕರು ಸಹ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ವಿದ್ಯಾರ್ಥಿನಿ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


