ಡಿಸಿಎಂ ಆಗಿಯೇ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದ ಮಾಜಿ ಸಚಿವಯಾದಗಿರಿ: ಲಿಂಗಾಯತ ಸಿಎಂ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ನಾನು ಡಿಸಿಎಂ ಆಗಿಯೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು (Baburao Chinchansur) ಗುರುಮಠಕಲ್‍ನಲ್ಲಿ (Gurumitkal) ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರಿಗೆ ನ್ಯಾಯಕೊಡಿಸುವ ಸಲುವಾಗಿ ನಾನು ರಾಜಕೀಯದಲ್ಲಿ ಜೀವಂತವಾಗಿದ್ದೇನೆ. ನಾನು ಉಪಮುಖ್ಯಮಂತ್ರಿಯಾಗಿಯೇ ರಾಜಕೀಯ ನಿವೃತ್ತಿಯಾಗುತ್ತೇನೆ. ಈ ಮೂಲಕ ಡಿಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಾನು ಈ ಬಾರಿ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರ್ಪಡೆ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆವಿಧಾನಸಭೆ ಚುನಾವಣೆ ವೇಳೆ ನನಗೆ ರಸ್ತೆ ಅಪಘಾತವಾಗಿತ್ತು. ಆಗ ನನಗೆ ಆರು ಆಪರೇಷನ್‍ಗಳಾಗಿವೆ. ನನ್ನ ವಿರೋಧಿಗಳು ಸಾಯುತ್ತಾರೆಂದು ಅಪಪ್ರಚಾರ ಮಾಡಿದ್ದರು. ಇದರಿಂದ ನಾನು ಸೋತಿದ್ದೇನೆ. ಇದರಿಂದ ನನ್ನ ಆತ್ಮಕ್ಕೆ ಬೆಂಕಿ ಹತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಇದರಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಕಾಂಗ್ರೆಸ್ ಇನ್ನಷ್ಟು ಪ್ರಬಲವಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿ ಕಾಂಗ್ರೆಸ್ (Congress) ಅಭ್ಯರ್ಥಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಯಿಸುತ್ತೇವೆ. ಅವರಿಗೆ ಟಿಕೆಟ್ ಸಿಕ್ಕರೆ ಬಹುಮತದಿಂದ ಸಂಸದರನ್ನಾಗಿ ಆಯ್ಕೆ ಮಾಡುತ್ತೇವೆ. ಇಲ್ಲಿಯವರೆಗೂ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೋ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಟಿಕೆಟ್ ಕೊಟ್ಟರು ಕೊಡಬಹುದು. ನನ್ನ ಪ್ರಕಾರ ಅವರ ಅಳಿಯನಿಗೆ ಟಿಕೆಟ್ ಕೊಡುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.ಲೋಕಸಭಾ ಚುನಾವಣೆಯ ಸಮೀಪದಲ್ಲಿ ಚಿಂಚನಸೂರು ಹೇಳಿಕೆ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದೆಯಾ? ಈ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೇ? ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


