ಧಾರವಾಡ: ಚಲಿಸುತ್ತಿದ್ದ ವೇಳೆಯಲ್ಲಿ  ಬೆಂಕಿ ಕಾಣಿಸಿಕೊಂಡು ಲಾರಿಯೊಂದು ಹೊತ್ತಿ ಉರಿದಿದೆ. ಧಾರವಾಡ ತಾಲೂಕಿನ ಮಮ್ಮಿಗಟ್ಟಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ವಾಹನವನ್ನು ನಿಲ್ಲಿಸಿ, ಚಾಲಕ ಮತ್ತು ಕ್ಲೀನರ್ ಹಾರಿ ಬೆಂಕಿಯಿಂದ ಜೀವ ಉಳಿಸಿಕೊಂಡಿದ್ದಾರೆ. ಜಲ್ಲಿಕಲ್ಲು ಸಾಗಾಣೆ ಮಾಡುತ್ತಿದ್ದ ಲಾರಿ ಧಾರವಾಡ ನಗರದಿಂದ ಬೆಳಗಾವಿ ಹೊರಟಿತ್ತು. ಲಾರಿ ಬೆಂಗಳೂರು ಮೂಲದ್ದು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ವೀಡಿಯೋ: ಕಾರು ಡಿಕ್ಕಿ ಹೊಡೆದು ಬೈಕ್ ಮೇಲೆ ಬಿದ್ದ ಲೈಟ್ ಕಂಬ- ಕ್ಷಣಾರ್ಧದಲ್ಲಿ ಸ್ಫೋಟಿಸಿದ ಬೈಕ್ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.Sign in to your account
Username or Email Address


Password

 Remember Me


