ಮಂಗಳೂರು: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.ಇಂದು ಮುಂಜಾನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ತಂತಿಗಳು ಲಾರಿ ಮೇಲೆ ಬಿದ್ದಿದೆ. ತಕ್ಷಣ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಚಾಲಕ ಲಾರಿಯಿಂದ ಜಿಗಿದು ಪರಾರಿಯಾಗಿದ್ದಾರೆ.ಲಾರಿಯಿಂದ ಬೆಂಕಿ ಹರಡೋ ಸಾಧ್ಯತೆಗಳು ಇದ್ದಿದ್ದರಿಂದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಬಂದು ಬೆಂಕಿ ನಂದಿಸೋ ಕಾರ್ಯ ಮಾಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


