ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಾಳೆಹಣ್ಣು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಇಲ್ಲಿನ ರಾಯಲ್ ವೃತ್ತದ ಬಳಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಪುಲಿವೆಂದುಲದಿಂದ ಹೊಸಪೇಟೆ ಮೂಲಕ ಬಿಜಾಪುರ ಜಿಲ್ಲೆ ಇಂಡಿ ಕಡೆ ಹೊರಟಿದ್ದ ಲಾರಿ, ವೇಗವಾಗಿ ಬಂದು ವೃತ್ತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ.ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಿದ್ದರಿಂದ ಕೆಲ ಕಾಲ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಎತ್ತಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಘಟನೆ ಬಗ್ಗೆ ಬಳ್ಳಾರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


