ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಿಷನ್ 150 ಗುರಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬೇರೆ ಪಕ್ಷಗಳ ತಂತ್ರಗಾರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ಇಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಬಿಎಸ್‍ವೈ, ಮುಂಬರುವ ದಿನಗಳಲ್ಲಿ ಅನ್ಯ ಪಕ್ಷಗಳ ಮತ್ತಷ್ಟು ಪ್ರಮುಖ ನಾಯಕರು ಬಿಜೆಪಿ ಸೇರಲಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ನಂಬಿ ಬರುವವರಿಗೆ ಸ್ವಾಗತವಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಜೊತೆ ಚರ್ಚಿಸಿದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗುವುದು ಅಂತಾ ಸ್ಪಷ್ಟಪಡಿಸಿದ್ರು.ಇದೇ ವೇಳೆ ಉಪಚುನಾವಣೆಯ ಬಗ್ಗೆ ಮಾತನಾಡಿದ ಅವರು, ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ವೇಳೆ ಸರ್ಕಾರಿ ಅಧಿಕಾರಿಗಳೇ ಹಣ ಹಂಚಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆಗೆ ಆಗ್ರಹಿಸಲಾಗುವುದು. ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸರ್ಕಾರಿ ಅಧಿಕಾರಿಗಳೇ ಮತದಾರರಿಗೆ ಹಣ ಹಂಚಿರುವ ಬಗ್ಗೆ ಕೆಲ ದಾಖಲೆಗಳು ಲಭ್ಯವಾಗಿವೆ. ಮತ್ತಷ್ಟು ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ ಅಂದ್ರು.Sign in to your account
Username or Email Address


Password

 Remember Me


