ಬೆಂಗಳೂರು: ಎಸಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನೆಲಮಂಗಲ ಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಗಢ ಸಂಭವಿಸಿದೆ.ಬೆಳಗ್ಗೆ ಎಂದಿನಂತೆ ಬ್ಯಾಂಕ್‍ಗೆ ಬಂದ ಸಿಬ್ಬಂದಿ ಎಸಿ ಆನ್ ಮಾಡಿದ್ದಾರೆ. ಆನ್ ಆಗುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡು ಶಬ್ಧ ಬಂದಿದೆ. ತಕ್ಷಣ ಬ್ಯಾಂಕಿನಲ್ಲಿದ್ದ ಸಿಬ್ಬಂದಿ ಹೊರಗೆ ಬಂದು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.ಆಗ್ನಿಶಾಮಕದ ಸಿಬ್ಬಂದಿ ಬರುವಷ್ಟರಲ್ಲಿ ಬ್ಯಾಂಕಿನಲ್ಲಿದ್ದ ಪೀಠೊಪಕರಣಗಳು, ಕಂಪ್ಯೂಟರ್‍ಗಳು ಹಾಗೂ ಹಲವಾರು ದಾಖಲೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬ್ಯಾಂಕಿಗೆ ಆವರಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಒಬ್ಬರ ಕೈಗೆ ಗಾಯವಾಗಿದೆ.ಬ್ಯಾಂಕಿನಲ್ಲಿದ್ದ ಅನೇಕ ದಾಖಲೆಗಳು ಸುಟ್ಟಿ ಹೋಗಿದ್ದು, ಸ್ಟ್ರಾಂಗ್ ರೂಂನಲ್ಲಿರುವ ಹಣಕ್ಕೆ ಯಾವುದೇ ತೊಂದರೆಯಾಗಿಲ್ಲ. ಅದನ್ನು ಬ್ಯಾಂಕಿನ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಬೇಕು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಬೆಂಕಿ ಅವಘಡದ ಬಗ್ಗೆ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


