ನೆಲಮಂಗಲ: ನೂತನವಾಗಿ ಪ್ರಾರಂಭವಾಗಿರುವ ಬೆಂಗಳೂರು ಹಾಸನ ರೈಲು ಮಾರ್ಗದಲ್ಲಿ, ಯುವಕನೋರ್ವ ರೈಲಿಗೆ ಸಿಲುಕಿ ಮೃತ ಪಟ್ಟಿದ್ದಾನೆ.ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಲೋಹಿತ್‍ನಗರ ಗ್ರಾಮದ ನಿವಾಸಿ ಪವನ್ ಮೃತ ದುರ್ದೈವಿ. ಮೃತ ಬುದ್ಧಿಭ್ರಮಣೆಯಿಂದ ಬಳಲುತ್ತಿದ್ದು, ಮುಂಜಾನೆ ರೈಲು ಹಳಿಯ ಬಳಿ ತೆರಳಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಇತ್ತೀಚೆಗೆ ಪ್ರಾರಂಭವಾಗಿರುವ ರೈಲ್ವೆ ಹಳಿಗೆ ಈ ಗ್ರಾಮಗಳ ಬಳಿ ಯಾವುದೇ ತಡೆಗೋಡೆ ನಿರ್ಮಾಣ ಮಾಡದಿರುವುದು ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಅವಘಡ ಸಂಭವಿಸದಂತೆ ಇಲಾಖೆ ಎಚ್ಚೆತ್ತು, ಕೂಡಲೇ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದು ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


