ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಡಿಲಕ್ಸ್ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು, 11 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ.ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಶ್ರೀರಂಗಪಟ್ಟಣದ ಕೆಆರ್‍ಎಸ್ ರಸ್ತೆಯ ಪಂಪ್ ಹೌಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಮತ್ತು ಪೆÇಲೀಸರ ನೆರವಿನೊಂದಿಗೆ ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನೆ ಬಗ್ಗೆ ಕೆಆರ್‍ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  Sign in to your account
Username or Email Address


Password

 Remember Me


