ರಾಮನಗರ: ಮದುವೆ ಮುಗಿಸಿ ಹಿಂದಿರುಗುವ ವೇಳೆ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ 60 ಜನರು ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಸಮೀಪ ನಡೆದಿದೆ.ಬುಧವಾರ ಕರೇನಹಳ್ಳಿ ಗ್ರಾಮದ ಗ್ರಾಮಸ್ಥರು ಮಾಗಡಿ ತಾಲೂಕಿನ ಕರ್ಲಳ್ಳಿ ಎತ್ತೋಕಲ್ಲು ಬಸವಣ್ಣನ ದೇವಾಲಯ ಬಳಿ ನಡೆಯುತ್ತಿದ್ದ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿಕೊಂಡು ವಾಪಾಸ್ಸಾಗುವ ವೇಳೆ ಬಸ್ ಪಲ್ಟಿ ಹೊಡೆದಿದೆ. ಬಸ್ ನಲ್ಲಿ ಸುಮಾರು 60 ಜನರಿದ್ದು ಬಹುತೇಕವಾಗಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. Sign in to your account
Username or Email Address


Password

 Remember Me


