ಶಿವಮೊಗ್ಗ: 2 ಬೈಕ್‌ಗಳ (Bike) ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು (Lorry) ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಮೃತರನ್ನು ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಕಾರು ಅಪಘಾತ: ನಟ ನಾಗಭೂಷಣ್ ಬಂಧನಶನಿವಾರ ರಾತ್ರಿ 2 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆ ಮೇಲೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದಿದೆ. ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನೀರುಪಾಲುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


