ಮಂಡ್ಯ: ಜಮೀನಿನಲ್ಲಿ ಉಳುಮೆ ಮಾಡುವಾಗ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.58 ವರ್ಷದ ಬೋರೆಗೌಡ ಎಂಬವರೇ ಹೃದಯಾಘಾತದಿಂದ ಸಾವನ್ನಪ್ಪಿದ ಕರ್ಮಯೋಗಿ. ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಮಳೆಯಾಗಿತ್ತು. ಹೀಗಾಗಿ ಬೋರೆಗೌಡ ಅವರು ಶುಕ್ರವಾರ ಮಧ್ಯಾಹ್ನ ತಮ್ಮ ಮಗನಿಗೆ ಬಿತ್ತನೆ ಬೀಜ ತರಲು ಹೇಳಿ, ಜಮೀನಲ್ಲಿ ಉಳುಮೆ ಮಾಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಉಳುಮೆ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದು ಬಿದಿದ್ದಾರೆ.ಈ ವೇಳೆ ಅಕ್ಕಪಕ್ಕದ ಜಮೀನಲ್ಲಿ ಕೆಲಸ ಮಾಡ್ತಿದ್ದ ರೈತರು ಬರುವಷ್ಟರಲ್ಲಿ ರೈತ ಬೋರೇಗೌಡ ಸಾವನ್ನಪ್ಪಿದ್ದಾರೆ. ಒಂದು ಕಡೆ ಉಳುಮೆಗೆಂದು ಕಟ್ಟಿದ್ದ ಎತ್ತುಗಳು, ಮತ್ತೊಂದು ಕಡೆ ಹೃದಯಾಘಾತದಿಂದ ಜಮೀನಲ್ಲೇ ಮೃತಪಟ್ಟ ರೈತನ ದೃಶ್ಯ ಎಂತಹವರ ಕಣ್ಣಲ್ಲೂ ಕಣ್ಣೀರು ತರಿಸುವಂತಿತ್ತು.Sign in to your account
Username or Email Address


Password

 Remember Me


