ಮಂಡ್ಯ: ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಣ್ಣೇಕೊಪ್ಪಲು ಗ್ರಾಮದ ಗೇಟ್ ಬಳಿ ನಡೆದಿದೆ.ರಾಮನಗರ ಮೂಲದ 25 ವರ್ಷದ ಉದ್ದೀನ್ ಲಡ್ಡು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಇನ್ನು ಬೈಕ್ ಹಿಂಬದಿ ಸವಾರ ಲೋಹಿತ್ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಕೊಳ್ಳೆಗಾಲದಿಂದ ಮುತ್ತತ್ತಿ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಕ್ಯಾಂಟರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಅಪಘಾತಕ್ಕೆ ಕ್ಯಾಂಟರ್ ಹಾಗೂ ಬೈಕ್ ಚಾಲಕರ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


