ಮಂಗಳೂರು: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ ತಂದೆ ಕೃಷ್ಣರಾಜ್ ಅವರ ಪಿಂಡ ಪ್ರದಾನ ಮಾಡುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದಾರೆ.ಐಶ್ವರ್ಯ ಜೊತೆ ತಾಯಿ ಬೃಂದಾ ರೈ ಮತ್ತು ಮಗಳು ಆರಾಧ್ಯ ಬಚ್ಚನ್ ಪಿಂಡ ಪ್ರದಾನ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮೃತ ಕೃಷ್ಣರಾಜ್ ಮಂಗಳೂರಿನ ಕೌಡೂರು ಮೂಲದವರು. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಸಂಗಮ ಕ್ಷೇತ್ರದಲ್ಲಿ ಪಿಂಡ ಪ್ರದಾನ ಕಾರ್ಯ ಮಾಡಲಾಗುತ್ತಿದೆ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ ಇಂದು ತಂದೆಯ ಪಿಂಡ ಪ್ರದಾನ ಕಾರ್ಯವನ್ನು ಐಶ್ವರ್ಯ ಕೈಗೊಳ್ಳಲಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣರಾಜ್ ರೈ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಾರ್ಚ್ 17ರಂದು ನಿಧನ ಹೊಂದಿದ್ದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. Sign in to your account
Username or Email Address


Password

 Remember Me


