ಬಳ್ಳಾರಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ, ಕಬ್ಬು ಬೆಂಕಿಗಾಹುತಿಯಾದ ಬೆಂಕಿ ಅವಘಡ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನ ಗುಡಿ ಗೇಟ್ ಬಳಿ ನಡೆದಿದೆ.ಮೊದಲಿಗೆ ಶ್ರೀ ರಾಮನಗರ ಮಾಗಣಿ ಪ್ರದೇಶದ ಅಮೀರ್ ಎಂಬವರ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ಪಕ್ಕದ ಜಮೀನುಗಳಿಗೆ ವ್ಯಾಪಿಸಿಕೊಂಡಿತ್ತು. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಶೀಘ್ರವೇ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಬರಗಾಲದ ವೇಳೆಯಲ್ಲಿ ಬೆಂಕಿ ಅನಾಹುತ ಸಂಭವಿಸಿರುವುದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. Sign in to your account
Username or Email Address


Password

 Remember Me


