ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ರವೀಂದ್ರನ್ (35) ಮತ್ತು ಲಕ್ಷ್ಮೀ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿಗ್ಗಾವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಹುಬ್ಬಳ್ಳಿ ನಗರದಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಶಿಗ್ಗಾವಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


