ಕಲಬುರಗಿ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಕಲಬುರಗಿ ಹೊರವಲಯದ ಭೋಸ್ಗಾ ಕೆರೆ ಬಳಿ ನಡೆದಿದೆ.ಘಟನೆಯಿಂದ ಆರೋಪಿ ವಿಕ್ರಂ ಮೂಲಿಮನಿ(24) ಕಾಲಿಗೆ ಗಂಭೀರ ಗಾಯಗಳಾಗಿವೆ. ಕಲಬುರಗಿ ನಗರದಲ್ಲಿ ಇತ್ತೀಚೆಗೆ ಶ್ರೀಕಾಂತ ರೆಡ್ಡಿ ಹಲ್ಲೆ ಸಂಬಂಧ ಮಾರ್ಕೆಟ್ ಸತೀಶನ ಸಹಚರ ರೌಡಿ ವಿಕ್ರಂ ಮೂಲಿಮನಿಯನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಜಪ್ತಿಗಾಗಿ ಇಂದು ಕರೆದುಕೊಂಡು ಹೋಗಿದ್ದರು. ಈ ಸಂಧರ್ಭದಲ್ಲಿ ರೌಡಿ ವಿಕ್ರಂ, ಪೇದೆ ಅಂಬಾದಾಸ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಆಗ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಯ ಬಲಗಾಲಿಗೆ ಗುಂಡು ಹೊಡೆದಿದ್ದಾರೆ.ಸದ್ಯ ಗಾಯಾಳು ವಿಕ್ರಂನನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


