ಹಾವೇರಿ: ಹಿಂಬದಿಯಿಂದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಕ್ರಾಸ್ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. 45 ವರ್ಷ ವಯಸ್ಸಿನ ಲವ್ ಮೃತ ಬಸ್ ಚಾಲಕ. ಘಟನೆಯಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಹೊರಟ್ಟಿತ್ತು ಎಂದು ತಿಳಿದುಬಂದಿದೆ.ಸ್ಥಳಕ್ಕೆ ತಡಸ್ ಪೊಲೀಸ್ ಸಿಬ್ಬಂದಿ, ಪಿಎಸ್‍ಐ ಹಾಗೂ ಸಿಪಿಐ ಸಂತೋಷ ಪವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


