ಮಂಡ್ಯ: ಅಕ್ಟೋಬರ್ 15ರ ವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನ (Cauvery Water) ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇದರಿಂದ ಮಂಡ್ಯದ ರೈತರ (Mandya Farmers) ಆಕ್ರೋಶ ಕಟ್ಟೆಯೊಡೆದಿದೆ.ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಖಂಡಿಸಿ ರಸ್ತೆಯಲ್ಲೇ ವಿನೂತನ ಪ್ರತಿಭಟನೆ ನಡೆಸಿದ ರೈತರು ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರುಈ ಕುರಿತು ಮಾತನಾಡಿದ ರೈತಮುಖಂಡರು, ಇಂದು ಮಂಡ್ಯದ ರೈತರಿಗೆ ಸಿಹಿ ಸುದ್ದಿ ಸಿಗುತ್ತೆ ಅಂತಾ ಭಾವಿಸಿದ್ದೆವು. ಆದ್ರೆ ಕಹಿ ಮತ್ತು ಖಾರವಾದ ಸುದ್ದಿ ಬಂದಿದೆ. ಈಗ ನಿಜವಾಗಿಯೂ ಹೊಟ್ಟೆ ಉರಿಯುತ್ತಿದೆ. ಇನ್ನೂ ಈ ರಾಜ್ಯದ ರೈತರಿಗೆ ಎಷ್ಟು ಹೊಟ್ಟೆ ಉರಿಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶಕಾವೇರಿ ಕೊಳ್ಳ ಪ್ರದೇಶದ ಜನರಿಗೆ ಕಾವೇರಿ ಪ್ರಾಧಿಕಾರ ನೀಡಿರುವ ಆದೇಶ ಹೊಟ್ಟೆ ಉರಿಯುವಂತೆ ಮಾಡಿದೆ. ಆದ್ದರಿಂದ ಈ ಭ್ರಷ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಾರವಾದ ಸಂದೇಶ ನೀಡಲು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದೇವೆ. ಇನ್ನಾದರೂ ಎಚ್ಚೆತ್ತುಕೊಂಡು ಕಾವೇರಿಯನ್ನ ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


