ಬೆಳಗಾವಿ: ಕಾಮುಕನೊಬ್ಬ ಬೀದಿಯಲ್ಲಿ ಮಲಗಿದ್ದ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.ಈ ನೀಚ ಕೃತ್ಯ ಎಸಗಿದಾತನನ್ನು ಹಣಮಂತ ಹಡಪದ ಎಂದು ಗುರುತಿಸಲಾಗಿದೆ. ಈತ ಸವದತ್ತಿ ಪಟ್ಟಣದಲ್ಲಿ ತಡರಾತ್ರಿ ರಸ್ತೆಯ ಬದಿಯಲ್ಲಿ ಮಲಗಿದ್ದ ಯುವತಿ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಈ ವೇಳೆ ಈತನ ನೀಚ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.ಘಟನೆ ಸಂಬಂಧ ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


