ಮೈಸೂರು: ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮಾಡಿದ ಟ್ವೀಟ್‍ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಕ್ರಿಯಿಸಿದ್ದಾರೆ.ಮಾರ್ಚ್ 25 ರಂದು ಶಬ್ಬಿರ್ (24) ಎಂಬವರು ಸೌದಿಯಲ್ಲಿ ಮೃತರಾಗಿದ್ದರು. 9 ತಿಂಗಳ ಹಿಂದೆ ಡ್ರೈವರ್ ಕೆಲಸಕ್ಕಾಗಿ ಶಬ್ಬಿರ್ ಸೌದಿಗೆ ತೆರಳಿದ್ದರು. ಮೂರು ದಿನಗಳ ಹಿಂದೆ ನೇಣುಬಿಗಿದ ಸ್ಥಿತಿಯಲ್ಲಿ ಶಬ್ಬೀರ್ ಶವ ಪತ್ತೆಯಾಗಿತ್ತು. ಶವದ ಸ್ಥಿತಿ ನೋಡಿದ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು.ಶಬ್ಬಿರ್ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಅಲ್ಲಿನ ಕಂಪೆನಿ ಮಾಲೀಕರು 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಬ್ಬಿರ್ ಮೃತದೇಹ ತರಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರತಾಪ್ ಸಿಂಹ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದು ಟ್ವೀಟ್ ಕೂಡ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್ ಭಾರತೀಯ ರಾಯಭಾರಿ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.@syedzabi85 @SushmaSwaraj Which city— India in SaudiArabia (@IndianEmbRiyadh) March 27, 2017@syedzabi85 Spoken to Indian embassy, it's taking time since it is suspicious suicide @IndianEmbRiyadh @SushmaSwaraj @ajxtopcop— Pratap Simha (@mepratap) March 27, 2017@syedzabi85 @SushmaSwaraj @mepratap Pl give his name and passport no @ajxtopcop— India in SaudiArabia (@IndianEmbRiyadh) March 27, 2017Pratap – Indian Embassy is attending to this. @mepratap @IndianEmbRiyadh @syedzabi85 @ajxtopcop— Sushma Swaraj (@SushmaSwaraj) March 28, 2017@SushmaSwaraj Very kind of you madam. Thank u so much. @IndianEmbRiyadh @syedzabi85 @ajxtopcop— Pratap Simha (@mepratap) March 28, 2017






 Advertisement 




Sign in to your account
Username or Email Address


Password

 Remember Me


