ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಮತ್ತೆ ತಲ್ವಾರ್ ಝಳಪಿಸಿದ್ದು, ಸೋಮವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಲಾಂಗ್ ಬೀಸಿ ಹತ್ಯೆಗೆ ಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಹಲ್ಲೆಗೊಳಗಾದ ಯುವಕನನ್ನು ನೌಷದ್(22) ಎಂದು ಗುರುತಿಸಲಾಗಿದೆ. ಈತನ ಮೇಲೆ ಉಳ್ಳಾಲದ ರಹಮಾನಿಯಾ ಮಸೀದಿ ಬಳಿ ರಮಿತ್ ಮತ್ತು ನಾಲ್ವರಿಂದ ತಲ್ವಾರ್ ದಾಳಿ ನಡೆದಿದ್ದು, ಪರಿಣಾಮ ನೌಷದ್ ಕೈಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಬಂದ ನೌಷದ್ ನನ್ನು ಉಳ್ಳಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ.ಸ್ಥಳಕ್ಕೆ ಡಿಸಿಪಿ ಶಾಂತ್ ರಾಜ್, ಎಸಿಪಿ ಶೃತಿ, ಎಸ್‍ಐ ಗೋಪಿಕೃಷ್ಣ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ. ಘಟನೆ ಈ ಬಗ್ಗೆ ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


