ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಮಾಜಿ ಸಂಸದ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ವಿಭಾಗದ ಮಾಜಿ ಅಧ್ಯಕ್ಷ ಕಾಗಲವಾಡಿ ಎಂ ಶಿವಣ್ಣ ನಿರ್ಧರಿಸಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕಾಗಲವಾಡಿ ಶಿವಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಂಬಂಧ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.ಮಾತುಕತೆ ಬಳಿಕ ಮೈಸೂರಿನಲ್ಲಿ ಹೇಳಿಕೆ ನೀಡಿದ ಶಿವಣ್ಣ, ಸದ್ಯದಲ್ಲೇ ನಾನು ಬಿಜೆಪಿ ಗೆ ಸೇರ್ಪಡೆಯಾಗಲಿದ್ದೇನೆ. ಉಪಚುನಾವಣೆಗೂ ಮುನ್ನವೇ ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸ್ಥಿತಿ ಚೆನ್ನಾಗಿಲ್ಲ. ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಇದೇ ಕಾರಣದಿಂದ ನಾನು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೆ ತೀರ್ಮಾನಿಸಿದ್ದೇನೆ ಅಂತ ಹೇಳಿದ್ರು.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


