ಬಾಗಲಕೋಟೆ: ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಸ್ವಾಮೀಜಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಅಂಕಲಿ ಕ್ರಾಸ್ ಬಳಿ ನಡೆದಿದೆ.ಬಾಗಲಕೋಟೆ ತಾಲೂಕಿನ ಶಾರದಾಳದ ಶ್ರೀಯಲ್ಲಾಲಿಂಗೇಶ್ವರ ಮಠದ ಸ್ವಾಮೀಜಿ ಶ್ರೀ ಶಂಕರಮಹರಾಜ್ ಗುರು ಮೃತಪಟ್ಟ ಸ್ವಾಮೀಜಿ. ಇಂದು ಕಲಾದಗಿಯಿಂದ ಶಾರದಾಳಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅಂಕಲಿಕ್ರಾಸ್ ಬಳಿ ಟ್ರ್ಯಾಕ್ಟರ್ ರಿವರ್ಸ್ ತೆಗೆದುಕೊಳ್ಳುವಾಗ ಹಿಂದೆಯಿಂದ ಬಂದ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ವಾಮೀಜಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಇನ್ನು ಸ್ಥಳಕ್ಕೆ ದೌಡಾಯಿಸಿದ ಕಲಾದಗಿ ಪೊಲೀಸರು ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


