ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರವನ್ನು ಬೊಟ್ಟು ಮಾಡುತ್ತಿರುವುದು ಸರಿಯಲ್ಲ. ಈ ಕುರಿತು ಮಂಗಳವಾರ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲಿಶಾವಾದ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:  ಅಂಗನವಾಡಿ ನೌಕರರಿಂದ ಆಹೋರಾತ್ರಿ ಧರಣಿ – ಬೀದಿಯಲ್ಲೇ ಮಕ್ಕಳ ನಿದ್ದೆಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ ಮೊದಲು 14ನೇ ಹಣಕಾಸು ಆಯೋಗದಿಂದ ಕೇಂದ್ರ ಸರ್ಕಾರ ನೀಡಿರುವ ಹಣವನ್ನು ರಾಜ್ಯ ಸರ್ಕಾರ ಯಾವ ಉದ್ದೇಶಕ್ಕೆ ಬಳಸಿಕೊಂಡಿದೆ ಎಂಬುದನ್ನು ತಿಳಿಸಲಿ. ಕೇಂದ್ರ ಸರ್ಕಾರ ನೀಡುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಬಳಿಕ ಸಮಸ್ಯೆ ಎದುರಾದಾಗ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಅಂತಾ ಸಿಎಂ ಆರೋಪಕ್ಕೆ ತಿರುಗೇಟು ನೀಡಿದರು.ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ: ಸಾವಿರಾರು ಮಹಿಳೆಯರಿಗೆ ಒಂದೇ ಶೌಚಾಲಯಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ: ಅಂಗನವಾಡಿ ಕಾರ್ಯಕರ್ತೆಯರ ಈಗಿನ ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ರಾಜ್ಯಕ್ಕೆ ನೀಡುತ್ತಿರುವ ಹಣ ದುರುಪಯೋಗವಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಕೆ ಮಾಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ರಾಜ್ಯ ಸರ್ಕಾರ ಬೇರೆ ಬೇರೆ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವೇ ಹಣ ನೀಡಬೇಕು ಅಂತಾ ಸಂಸದೆ ಶೋಭಾಕರಂದ್ಲಾಜೆ ಆಗ್ರಹಿಸಿದರು.ಇದನ್ನೂ ಓದಿ:  ಅಂಗನವಾಡಿ ನೌಕರರ ಪ್ರತಿಭಟನೆಗೆ ಬೆಚ್ಚಿದ ಬೆಂಗಳೂರು – ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ಸರ್ಕಾರ ಹೇಳಿದ್ದೇನು?: ಮಂಗಳವಾರ ವಿಧಾನಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಮತ್ತು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಅನುದಾನವನ್ನು ಕಡಿತಗೊಳಿಸಿದ್ದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಿದ್ದರು.ಇದನ್ನೂ ಓದಿ: ಅಂಗನವಾಡಿ ನೌಕರರ ಧರಣಿ- ಹೆಚ್‍ಡಿಕೆ ಭೇಟಿ, ನೊಂದ ಮಹಿಳೆಯರಿಗೆ ಸಾಂತ್ವನಉಮಾಶ್ರೀ ಮಾತನಾಡಿ, ಯುಪಿಎ ಸರ್ಕಾರ ಇದ್ದಾಗ ಕೇಂದ್ರ ಸರ್ಕಾರ ಶೇ.90ರಷ್ಟು, ರಾಜ್ಯ ಸರ್ಕಾರ ಶೇ.10 ಗೌರವ ಧನ ಕೊಡುತಿತ್ತು. ಆದರೆ ಕೇಂದ್ರ ಸರ್ಕಾರ ಈಗ ಶೇ. 60, ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 5,200 ರೂ. ಸಹಾಯಧನ ಕೊಡ್ತಿದ್ರೆ, ಕೇಂದ್ರ ಸರ್ಕಾರದ ಪಾಲು 1,800 ರೂ. ಮಾತ್ರ. ಇದರಿಂದಾಗಿ ಒಟ್ಟು 7000 ರೂ ಸಂಬಳ ಸಿಗುತ್ತಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.ಇದನ್ನೂ ಓದಿ: ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗುಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿರಾಗಾಂಧಿ ಕಾಲದಲ್ಲಿ ಗೌರವ ಧನ ಕೊಡಲು ಆರಂಭವಾಗಿದ್ದು, ಅಂದಿನಿಂದಲೂ ಕೇಂದ್ರ ಸರ್ಕಾರ ಶೇ.90 ರಷ್ಟು ಗೌರವಧನ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಪಾಲು ಕಡಿತಗೊಳಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಪ್ರತಿ ವರ್ಷ ನಾವು 500 ರೂ ಹೆಚ್ಚಳ ಮಾಡಿದ್ದೇವೆ. ಆದ್ರೆ 2016-17ರಲ್ಲಿ ಹೆಚ್ಚಳ ಮಾಡಿಲ್ಲ, ಅದು ಕೇಂದ್ರ ಸರ್ಕಾರದ ಕ್ರಮದಿಂದ ಆಗಿಲ್ಲ. ಬರೀ ಮಾತನಾಡಬಹುದು, ಕಾಳಜಿ ತೋರಿಸಬಹುದು.ಆದ್ರೆ ಕೇಂದ್ರ ಸರ್ಕಾರ ಪಾಲು ಕಡಿಮೆ ಮಾಡಿದ್ದು ಯಾಕೆ? ಇದು ಮಹಿಳಾ ಪರ ಕಾಳಜಿನಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.ಇದನ್ನೂ ಓದಿ: ಸತತ 2ನೇ ದಿನವೂ ಅಂಗನವಾಡಿ ನೌಕರರ ಅಹೋರಾತ್ರಿ ಧರಣಿಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?Sign in to your account
Username or Email Address


Password

 Remember Me


