ಧಾರವಾಡ: ಬಸ್‍ನ ಸ್ಟೇರಿಂಗ್ ರಾಡ್ ತುಂಡಾಗಿ ಖಾಸಗಿ ಬಸ್ ಪಲ್ಟಿ ಹೊಡೆದ ಘಟನೆ ಧಾರವಾಡದಲ್ಲಿ ನಡೆದಿದೆ.ಭಾನುವಾರ ರಾತ್ರಿ ಹುಬ್ಬಳ್ಳಿ ನಗರದಿಂದ ಧಾರವಾಡ ನಗರಕ್ಕೆ ಬರುವ ವೇಳೆ ನಗರದ ಹೊರವಲಯದ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದರು.ಬಸ್ ಪಲ್ಟಿಯಾದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗುರಪ್ಪ ಎಂಬವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ತೀವ್ರ ನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


