ತುಮಕೂರು: ಟೈರ್ ಸ್ಫೋಟಗೊಂಡ ಪರಿಣಾಮ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದಿದ್ದು, 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರೇಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.ಬೀರೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್‍ನ ಟೈರ್ ಬಿಸಿಲಿನಿಂದಾಗಿ ಸ್ಫೋಟಗೊಂಡಿದೆ. ಇದರ ಪರಿಣಾಮ ಟೆಂಪೋ ಪಲ್ಟಿಯಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆಯಲ್ಲಿ ಗಾಯಗೊಂಡವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಹೆದ್ದಾರಿಯಲ್ಲಿದ್ದ ಟೆಂಪೋ ತೆರವು ಮಾಡುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿದ್ದಾರೆ.ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಆಟೋಗಳಿಗೆ ಲಾರಿ ಡಿಕ್ಕಿಯಾಗಿ 12 ಮಂದಿ ಸ್ಥಳದಲ್ಲೇ ಸಾವು Sign in to your account
Username or Email Address


Password

 Remember Me


